ಲೋಕಸಮರದಲ್ಲಿ ಬಿಜೆಪಿ ಗೆಲುವು: ಪ್ರಧಾನಿ ಮೋದಿಗೆ ಶುಭ ಕೋರಿದ ಮಾಜಿ ಸಿಎಂ ಸಿದ್ದರಾಮಯ್ಯ.. ಬೆಂಗಳೂರು,ಮೇ,23,2019(..): ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಭರ್ಜರಿ ಗೆಲವು ದಾಖಲಿಸಿದ್ದು, ಮತ್ತೆ ಕೇಂದ್ರದ ಅಧಿಕಾರ ಗದ್ದುಗೆ ಹಿಡಿಯಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ. ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಂದಿನ 5 ವರ್ಷ ಜನಮೆಚ್ಚುವ ಕೆಲಸವನ್ನ ಸರ್ಕಾರ ಮಾಡಲಿ. ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವಜನಾಂಗದ ಶಾಂತಿಯ ತೋಟ ಎಂಬಂತೆ ಕೆಲಸ ಮಾಡಲಿ ಎಂದು ಶುಭಹಾರೈಸಿದ್ದಾರೆ. ಲೋಕಸಭೆ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಿದ್ದು ಎನ್ ಡಿಎ 344 ಯುಪಿಎ 91 ಹಾಗೂ ಇತರ 107 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ. ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ರಚಿಸಲು ಬೇಕಾದ ಮ್ಯಾಜಿಕ್ ನಂಬರ್ ದಾಟಿದ್ದು ಮತ್ತೆ ಅಧಿಕಾರಕ್ಕೇರಲು ಸಿದ್ಧತೆ ನಡೆಸುತ್ತಿದೆ. : . #election2019 # # #