ಸರ್ಕಾರ ಅಳಿವು ಉಳಿವಿನ ಬಗ್ಗೆ ಈಗಲೇ ಏನು ಹೇಳಲ್ಲ- ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆ ಬಗ್ಗೆ ಬಿಎಸ್ ಯಡಿಯೂರಪ್ಪ ಏನಂದ್ರು..? ಬೆಂಗಳೂರು,ಮೇ,24,2019(..): ರಾಜ್ಯದಲ್ಲೇ ಜಿದ್ಧಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದಾರೆ. ಈ ನಡುವೆ ಇವರಿಗೆ ಬಿಜೆಪಿ ಬೆಂಬಲ ನೀಡಿದ್ದು ಇನ್ನು ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಕುತೂಹಲ ಮೂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, ಸುಮಲತಾ ಅಂಬರೀಶ್ ಅವರು ಅವರಾಗಿಯೇ ಬಂದರೆ ಸ್ವಾಗತಿಸುತ್ತೇವೆ . ಆದರೆ ನಾವಾಗಿಯೇ ಅವರನ್ನ ಆಹ್ವಾನಿಸುವುದಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಬಿಎಸ್ ಯಡಿಯೂರಪ್ಪ, ಸರ್ಕಾರ ಅಳಿವು ಉಳಿವಿನ ಬಗ್ಗೆ ಈಗಲೇ ಏನು ಹೇಳಲ್ಲ. ಈ ಬಗ್ಗೆ ರಾಷ್ಟ್ರೀಯ ನಾಯಕರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ. ಮೇ 29 ರಂದು ಎಲ್ಲಾ ಸಂಸದರ ಜತೆ ದೆಹಲಿಗೆ ತೆರಳುತ್ತೇವೆ ಎಂದು ತಿಳಿಸಿದರು. ಇನ್ನು ಜೆಡಿಎಸ್ ಕಾಂಗ್ರೆಸ್ ಮುಂದೆ ತೆಗೆದುಕೊಳ್ಳುವ ನಿರ್ಧಾರದ ಮೇಲೆ ರಾಜಕಾರಣ ನಿಂತಿದೆ. ಜನರ ತೀರ್ಮಾನ ಏನಿದೆ ಅದರಂತೆ ನಡೆದುಕೊಳ್ಳುವ ನಂಬಿಕೆ ಇದೆ. ಸರ್ಕಾರದ ಅಳಿವು ಉಳಿವಿನ ಬಗ್ಗೆ ಈಗಲೇ ಏನು ಹೇಳಲ್ಲ ಎಂದು ಬಿಎಸ್ ವೈ ತಿಳಿಸಿದರು. : ’ # # # #