ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಅಸಮಾಧಾನ ಹೊರ ಹಾಕಿದ ಸಚಿವ ಆರ್.ವಿ ದೇಶಪಾಂಡೆ… ವಿಜಯಪುರ,ಮೇ,19,2019(..): ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂದು ಹೇಳಿತ್ತಿರುವ ಸಿದ್ದರಾಮಯ್ಯ ಬೆಂಬಲಿಗರಯ ಚಮಚಗಿರಿ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ವಿರುದ್ದ ಕಂದಾಯ ಸಚಿವ ಆರ್.ವಿ ದೇಶಪಾಂಡೆ ಅಸಮಾಧಾನ ಹೊರ ಹಾಕಿದ್ದಾರೆ. ಹೆಚ್.ವಿಶ್ವನಾಥ್ ಹೇಳಿಕೆ ಗೊಂದಲ ಸೃಷ್ಠಿಸುತ್ತಿದೆ. ಈ ರೀತಿ ಗೊಂದಲ ಹೇಳಿಕೆಗಳನ್ನ ನೀಡುವುದು ಸರಿಯಲ್ಲ ಎಂದು ಸಚಿವ ಆರ್.ವಿ ದೇಶಪಾಂಡೆ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರ ಜಿಲ್ಲೆ ನಾಗಠಾಣದಲ್ಲಿ ಮಾತನಾಡಿದ ಸಚಿವ ಆರ್.ವಿದೇಶಪಾಂಡೆ, ಸಮನ್ವಯ ಸಮಿತಿಯನ್ನ ರಚಿಸಿದ್ದು, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತ್ತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ. ಸಿದ್ದರಾಮಯ್ಯ ಸಮನ್ವಯ ಸಮಿತಿ ರಚಿಸಿಲ್ಲ. ಹೆಚ್.ವಿಶ್ವನಾಥ್ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ಎರಡು ಪಕ್ಷದ ನಾಯಕರು ಸಮನ್ವಯ ಸಮಿತಿ ಸದಸ್ಯರಾಗಿದ್ದಾರೆ. ಹೆಚ್.ವಿಶ್ವನಾಥ್ ಎಲ್ಲಾ ಹೇಳಿಕೆಗಳಿಗೆ ಉತ್ತರಿಸಲು ಆಗಲ್ಲ ಎಂದರು. ಹಾಗೆಯೇ ಸರ್ಕಾರ ನಡೆಸಲು ಮನ್ನಸ್ಸಿಲ್ಲದಿದ್ದರೇ ಹೇಳಿಬಿಡಲಿ ಎಂದು ಟಾಂಗ್ ಕೊಟ್ಟರು. : . # # #