ಕುಂದಗೋಳ ಮತ್ತು ಚಿಂಚೋಳಿ ಕ್ಷೇತ್ರದ ಉಪಚುನಾವಣೆ: ಬೆಳಿಗ್ಗೆ 11 ಗಂಟೆ ವೇಳೆಗೆ ಮತದಾನ ಪ್ರಮಾಣವೆಷ್ಟು ಗೊತ್ತೆ… ಕಲ್ಬುರ್ಗಿ,ಮೇ,19,2019(..): ಇಂದು ಧಾರವಾಡ ಜಿಲ್ಲೆಯ ಕುಂದಗೋಳ ಹಾಗೂ ಕಲ್ಬುರ್ಗಿಯ ಚಿಂಚೋಳೀ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣಾ ಮತದಾನ ನಡೆಯುತ್ತಿದೆ. ಬೆಳಿಗ್ಗೆ 11 ಗಂಟೆ ವೇಳೆಗೆ ಚಿಂಚೋಳೀ ಕ್ಷೇತ್ರದಲ್ಲಿ ಶೇ. 19.86ರಷ್ಟು ಹಾಗೂ ಕುಂದಗೋಳ ಕ್ಷೇತ್ರದಲ್ಲಿ ಶೇ.23.12ರಷ್ಟು ಮತದಾನ ನಡೆದಿದೆ. ಕುಂದಗೋಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಐ.ಚಿಕ್ಕನಗೌಡರ್ ಅವರು ಅದರಗುಂಚಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ಮತದಾನ ಮಾಡಿದರು. ಉಮೇಶ್ ಜಾಧವ್ ರಾಜೀನಾಮೆಯಿಂದ ಚಿಂಚೋಳಿ ಕ್ಷೇತ್ರ ಹಾಗೂ ಸಚಿವ ಸಿಎಸ್ ಶಿವಳ್ಳಿ ಅವರ ನಿಧನದಿಂದ ಕುಂದಗೋಳ ಕ್ಷೇತ್ರ ತೆರವಾಗಿತ್ತು . : -. 11am # # #