ಜವರಾಯನ ಅಟ್ಟಹಾಸ: ಟಿಪ್ಪರ್ ಡಿಕ್ಕಿಯಾಗಿ ಗೂಡ್ಸ್ ವಾಹನದಲ್ಲಿದ್ದ ಐವರು ದುರ್ಮರಣ… ವಿಜಯಪುರ,ಮೇ,18.2019(..): ಸಂಬಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಸ್ ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿಯಾಗಿ ಗೂಡ್ಸ್ ವಾಹನದಲ್ಲಿದ್ದ ಐವರು ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಮುದ್ದೇಬಿಹಾಳ ತಾಲೂಕಿನ ಕಂದಗನೂರು ಬಳಿ ಈ ಘಟನೆ ನಡೆದಿದೆ. ಸಂಬಂಧಿಯೊಬ್ಬರ ಅಂತ್ಯಕ್ರಿಯೆ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಕಂದಗನೂರಿನಲ್ಲಿ ಈ ಅವಘಡ ಸಂಭವಿಸಿದೆ. ಮೃತರು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡ ತಾಲೂಕಿನ ಹಳದೂರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಘಟನೆಯಲ್ಲಿ 10ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎನ್ನಲಾಗುತ್ತಿದ್ದು, ಅವರನ್ನ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್‌ ಠಾಯಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. . # # # #