ಮಾಜಿ ಸಿಎಂ ಹೆಚ್.ಡಿಕೆ ಭೇಟಿಯಾದ ವಿ.ಸೋಮಣ್ಣ. ರಾಮನಗರ,ಜನವರಿ,31,2024(..):ಲೋಕಸಭೆ ಚುನಾವಣೆಗೆ ಬಿಜೆಪಿ ಜೆಡಿಎಸ್ ಮೈತ್ರಿಯಾಗಿದ್ದು ಈ ನಡುವೆ ಮಾಜಿ ಸಚಿವ ವಿ.ಸೋಮಣ್ಣ ಇಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿದ್ದಾರೆ. ರಾಮನಗರದ ಬಿಡದಿಯ ತೋಟದ ಮನೆಯಲ್ಲಿ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಮಾಜಿ ಸಚಿವ ವಿ.ಸೋಮಣ್ಣ ಭೇಟಿಯಾಗಿದ್ದು ಲೋಕಸಭೆ ಚುನಾವಣೆ ಸಂಬಂಧ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಲೋಕಸಭೆ ಚುನಾವಣೆಗೆ ಮೈತ್ರಿಯಾದ ಬಳಿಕ ಇದು ವಿ.ಸೋಮಣ್ಣ ಅವರ 2ನೇ ಭೇಟಿಯಾಗಿದೆ. ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದಲ್ಲಿ ಅಸಮಾಧಾನಗೊಂಡಿದ್ದರು. ಅಲ್ಲದೆ ವಿ.ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿಯೂ ಹಬ್ಬಿತ್ತು. ನಂತರ ಅವರು ಬಿಜೆಪಿ ತೊರೆಯಲ್ಲ ಎಂದು ಸ್ಪಷ್ಟನೆ ನೀಡಿದ್ದರು. : -.- - -.