ಮೈಸೂರು:ನಾಯಿಗಳ ದಾಳಿಗೆ ಜಿಂಕೆ ಬಲಿ… ಮೈಸೂರು,ಮೇ,16,2019(..) ಆಹಾರ ಆರಿಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಚಿನ್ನಂಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಂಜನಗೂಡಿನ ಚಿನ್ನಂಬಳ್ಳಿ ಗ್ರಾಮದ ಬಳಿ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಜಿಂಕೆ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದು ನಾಯಿಗಳನ್ನ ಓಡಿಸುವಷ್ಟರಲ್ಲಿ ಜಿಂಕೆಯ ಕುತ್ತಿಗೆ ಭಾಗಕ್ಕೆ‌ಗಾಯವಾಗಿತ್ತು. ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಜಿಂಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ ‌ಮೃತಪಟ್ಟಿದೆ. ಗ್ರಾಮಸ್ಥರು ಘಟನೆಯ ಬಗ್ಗೆ ಮಾಹಿತಿಯನ್ನ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. : : - –