ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ? ತನಿಖೆಗೆ ಆರ್.ಅಶೋಕ್ ಆಗ್ರಹ ಬೆಂಗಳೂರು,ಸೆಪ್ಟಂಬರ್,16,2024 (..):ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದು, ಈ ಕೋಮುದಳ್ಳುರಿಯಲ್ಲಿ ನಿಷೇಧಿತ ಸಂಘಟನೆಗಳ ಕೈವಾಡವಿರುವ ಅನುಮಾನ ಮತ್ತಷ್ಟು ಗಟ್ಟಿಯಾಗಿತ್ತಿದೆ. ಹೀಗಾಗಿ ಪ್ರಕರಣವನ್ನ ತನಿಖೆಗೆ ವಹಿಸುವಂತೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಆರ್.ಅಶೋಕ್, ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆಯಲ್ಲಿ ಮೂವರು ಕಿಡಿಗೇಡಿಗಳು ಪಾಕಿಸ್ತಾನ ಜಿಂದಾಬಾದ್ ಘೋಷಣೆಗಳು ಕೂಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳ ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಚಿಕ್ಕಮಗಳೂರಲ್ಲಿ ಬೈಕ್ ನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದಿರುವ ಪುಂಡಾಟ, ದಾವಣಗೆರೆಯ ಗಾಂಧಿನಗರ ಹಾಗೂ ಅಹ್ಮದ್ ನಗರಗಳಲ್ಲಿ ಹಿಂದೂ ಯುವಕರು ಬಾವುಟ ಕಟ್ಟಿದ್ದಕ್ಕೆ ಮತಾಂಧ ಪುಂಡರು ಅವರ ಮೇಲೆ ಹಲ್ಲೆ ಮಾಡಿರುವುದು, ಇವನ್ನೆಲ್ಲಾ ಗಮನಿಸುತ್ತಿದ್ದರೆ ಈ ಪ್ರಚೋದನಕಾರಿ ಘಟನೆಗಳು ಗಣೇಶೋತ್ಸವವನ್ನೇ ಟಾರ್ಗೆಟ್ ಮಾಡಿರುವಂತಿದೆ. ಇಂತಹ ಘಟನೆಗಳು ಅಯೋಧ್ಯ ರಾಮ ಮಂದಿರದ ಉದ್ಘಾಟನೆ ಸಂದರ್ಭದಲ್ಲಿಯೂ ನಡೆದಿತ್ತು. ಹಿಂದೂಗಳ ಹಬ್ಬಗಳು, ಉತ್ಸವಗಳು, ಸಂಭ್ರಮಾಚರಣೆಗಳನ್ನೇ ಗುರಿಯಾಗಿಸಿ ರಾಜ್ಯಾದ್ಯಂತ ನಡೆಸುತ್ತಿರುವ ಇಂತಹ ದುಷ್ಕೃತ್ಯಗಳ ಹಿಂದೆ ಮತೀಯ ಮೂಲಭೂತವಾದಿ ಸಂಘಟನೆಗಳ ದೊಡ್ಡ ಜಾಲವೇ ಇರುವಂತಿದೆ ಎಂದು ಕಿಡಿಕಾರಿದ್ದಾರೆ. ಅಂತಾರಾಜ್ಯ, ಅಂತರಾಷ್ಟ್ರೀಯ ನಂಟು ಹೊಂದಿರುವ ಇಂತಹ ವ್ಯವಸ್ಥಿತ, ಪ್ರಾಯೋಜಿತ, ಜಾಲವನ್ನ ಬೇಧಿಸುವುದು ಸ್ಥಳೀಯ ಪೊಲೀಸರಿಂದ ಅಸಾಧ್ಯವಾಗಿದ್ದು, ಕೂಡಲೇ ಈ ಪ್ರಕರಣಗಳನ್ನ ತನಿಖೆಗೆ ಒಪ್ಪಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್.ಅಶೋಕ್ ಹೇಳಿದ್ದಾರೆ. : , - , .,