ಸಿಎಂ ಹೆಚ್.ಡಿ ಕುಮಾರಸ್ವಾಮಿ ತಂಗಿರುವ ಹೋಟೆಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…. ಹುಬ್ಬಳ್ಳಿ,ಮೇ,14,2019(..): ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಸ್ತವ್ಯ ಹೂಡಿರುವ ಹೋಟೆಲ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು ಹಲವು ವಿಚಾರಗಳ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ. ಚಿಂಚೋಳಿ ಮತ್ತು ಕುಂದಗೋಳ ಉಪ ಚುನಾವಣೆ ಬಗ್ಗೆ ಹಾಗೂ ಮೈತ್ರಿ ಸರ್ಕಾರದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನ ಕುರಿತು ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕರಾದ ಬಸವರಾಜ ಹೊರಟ್ಟಿ, ಸಚಿವರಾದ ಬಂಡೆಪ್ಪ ಕಾಶೆಂಪುರ, ಜಮೀರ್ ಅಹ್ಮದ್ ಖಾನ್ ಸೇರಿ ಹಲವು ಮುಖಂಡರುಯ ಉಪಸ್ಥಿತರಿದ್ದಾರೆ. ಕಾಂಗ್ರೆಸ್ –ಜೆಡಿಎಸ್ ದೋಸ್ತಿ ಪಕ್ಷಗಳಲ್ಲಿ ಉಭಯ ಮುಖಂಡರು, ಕಾರ್ಯಕರ್ತರು ಪರಸ್ಪರ ಕಚ್ಚಾಟ ನಡೆಸುತ್ತಿದ್ದು ಈ ಹಿನ್ನೆಲೆ ಭಿನ್ನಮತ ಶಮನಕ್ಕೆ ಸಿಎಂ ಹೆಚ್.ಡಿಕೆ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಯತ್ನ ನಡೆಸುತ್ತಿದ್ದಾರೆ. : - –- –