ರಸ್ತೆ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಪ್ರತಿಭಟನೆ… ಮೈಸೂರು,ಮೇ,13,2019(..): ಕೆ.ಆರ್. ಸಾಗರ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆವರೆಗೆ ಇರುವ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪ್ರತಿಭಟನೆ ನಡೆಸಿತು. ನಗರದ ರಾಷ್ಟ್ರೀಯ ಹೆದ್ದಾರಿ ಸಹಾಯಕ ಕಾರ್ಯಪಾಲಕರ ಉಪವಿಭಾಗ ಕಚೇರಿ ಎದುರು ರೈತ ಮುಖಂಡರ ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಗ್ರಾಮೀಣ ಭಾಗದ ರಸ್ತೆ ಅಭಿವೃದ್ಧಿ ಪಡಿಸದ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರ ಜಿಲ್ಲಾ ವ್ಯಾಪ್ತಿಗೆ ಸೇರುವ ಸಾಗರ ರೈಲ್ವೆ ನಿಲ್ದಾಣದಿಂದ ಸಾಗರಕಟ್ಟೆವರೆಗಿನ ಟರ್ಕಿ ಟ್ರಾವೆಲ್ಸ್ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ರಸ್ತೆಯಲ್ಲಿ ದ್ವಿಚಕ್ರವಾಹನ ಸಂಚರಿಸುವುದು ಕೂಡಾ ಕಷ್ಟಕರವಾಗಿದೆ. ಅನೇಕ ಬಾರಿ ಈ ರಸ್ತೆ ಅಭಿವೃದ್ಧಿ ಪಡಿಸುವಂತೆ ಮನವಿ ಮಾಡಿದ್ರೂ ಅಧಿಕಾರಿಗಳು ಗಮನ ಹರಿಸ್ತಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೊಳಿಸಿ ಅಗಲೀಕರಣ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದರು. : – - – - -