ಮೈಸೂರು: ಓದುವಾಗ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು…. ಮೈಸೂರು,ಮೇ,13,2019(..): ಓದುವಾಗ ವಿದ್ಯಾರ್ಥಿನಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಸರಸ್ವತಿಪುರಂನ ಕಾಮಾಕ್ಷಿ ರಸ್ತೆಯಲ್ಲಿನ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಸರಸ್ವತಿಪುರಂ ನಿವಾಸಿ ಭಾವನಾ(23) ಎಂಬವವರೇ ಕುಸಿದು ಬಿದ್ದು ಸಾವನ್ನಪ್ಪಿದ ವಿದ್ಯಾರ್ಥಿನಿ.. ಭಾವನಾ ಎಂಬಿಎ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಸಂಜೆ ಮನೆಯಲ್ಲಿ ಓದುತು ಕುಳಿತಿದ್ದರು. ಕುಳಿತ ಸ್ಥಳದಲ್ಲಿಯೇ ಭಾವನ ಕುಸಿದು ಬಿದ್ದಿದ್ದಾರೆ. ಬಳಿಕ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ… ಕಳೆದ ಮೂರು ದಿನಗಳಿಂದ ವಿದ್ಯಾರ್ಥಿನಿ ಭಾವನಾಗೆ ಜ್ವರ ಕೂಡ ಇತ್ತು ಎನ್ನಲಾಗಿದೆ. ಅವರ ತಾತ ಚಂದ್ರಶೇಖರ್ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. : – – - -