ಮೇ29 ರಂದು ಆನೇಕಲ್ ಪುರಸಭೆ ಮತ್ತು ಹೆಬ್ಬಗೋಡಿ ನಗರಸಭೆ 26ನೇ ವಾರ್ಡ್ ಗೆ ಚುನಾವಣೆ… ಬೆಂಗಳೂರು, ಮೇ 10,2019(..): ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ಪುರಸಭೆಗೆ ಮೇ 29 ರಂದು ಚುನಾವಣೆ ನಡೆಯಲಿದೆ. ಅಲ್ಲದೆ, ಅದೇ ದಿನ ಹೆಬ್ಬಗೋಡಿ ನಗರ ಸಭೆಯ 26ನೇ ವಾರ್ಡ್ ಗೂ ಚುನಾವಣೆ ನಡೆಯಲಿದೆ. ಚುನಾವಣಾ ವೇಳಾಪಟ್ಟಿ : ಎಲ್ಲಾ ಕಾರ್ಯ ದಿನಗಳಲ್ಲಿ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 3.00 ಗಂಟೆಯವರೆಗೆ ನಾಮ ಪತ್ರಗಳನ್ನು ಸಲ್ಲಿಸಬಹುದಾಗಿದೆ. ಅಂತೆಯೇ, ನಾಮಪತ್ರಗಳನ್ನು ಸಲ್ಲಿಸಲು ಮೇ 16 ಕೊನೆಯ ದಿನಾಂಕ ವಾಗಿದೆ. ಮೇ 17 ರಂದು ಬೆಳಿಗ್ಗೆ 11-00 ಗಂಟೆಗೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಮೇ 20 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿದ್ದು, ಅಂದು ಮಧ್ಯಾಹ್ನ 3-00 ಗಂಟೆಯೊಳಗೆ ನಾಮಪತ್ರ ಹಿಂಪಡೆಯಬಹುದಾಗಿದೆ. ಮತದಾನ ಅವಶ್ಯವಿದ್ದಲ್ಲಿ, ಮೇ 29 ರಂದು ಬೆಳಿಗ್ಗೆ 7-00 ಗಂಟೆಯಿಂದ ಸಂಜೆ 5-00 ಗಂಟೆಯವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅವಶ್ಯಕತೆ ಇದ್ದಲ್ಲಿ, ಮೇ 30 ರಂದು ನಡೆಸಲಾಗುವುದು. ಮೇ 31 ರಂದು ತಾಲ್ಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯಲಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. : – - –- -26th – 29th