ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಪ್ರಮಾಣ ವಚನ ಸ್ವೀಕಾರ… ಬೆಂಗಳೂರು, ಮೇ,10,2019(..): ಕರ್ನಾಟಕ ಉಚ್ಛ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಅಭಯ್ ಶ್ರೀನಿವಾಸ್ ಓಕಾ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನ್ಯಾಯಮೂರ್ತಿ ಒಕಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ , ಹೈಕೋರ್ಟ್ ನ ಹಿರಿಯ ವಕೀಲರುಗಳು ಉಪಸ್ಥಿತರಿದ್ದರು. ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿರುವ ಶ್ರೀನಿವಾಸ್ ಓಕಾ ಅವರು ಬಾಂಬೆ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿ ಆಗಿದ್ದರು. ಈ ನಡುವೆ ಓಕಾ ಅವರನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳನ್ನಾಗಿ ನೇಮಕ ಮಾಡುವಂತೆ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಕಾನೂನು ಸಚಿವಾಲಯ ಹಾಗೂ ರಾಷ್ಟ್ರಪತಿ ಭವನಕ್ಕೆ ಶಿಫಾರಸು ಮಾಡಿತ್ತು. ಕೊಲಿಜಿಯಂ ಶಿಪಾರಸನ್ನು ಮಾನ್ಯ ಮಾಡಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಂಗಳವಾರ ಓಕಾ ಅವರ ನೇಮಕ ಮಾಡಿ ಆದೇಶ ಹೊರಡಿಸಿದ್ದರು. : - -- -