ಮೈಸೂರು: ನಿಯಂತ್ರಣ ತಪ್ಪಿ ಬೈಕ್ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು… ಮೈಸೂರು,ಮೇ,10,2019(..): ಚಾಲಕನ ನಿಯಂತ್ರಣ ಕಳೆದುಕೊಂಡು ಬೈಕ್ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆ ತಾಲೋಕಿನ ಕೋಳಗಾಲ ಬಳಿ ಈ ಘಟನೆ ನಡೆದಿದೆ. ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದ ಸುಮಾರು 38 ವರ್ಷದ ಅಪರಿಚಿತ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಗಾಯಾಳು ಎಂದು ಭಾವಿಸಿ ಸ್ಥಳೀಯರು ಮೃತದೇಹ‌‌ವನ್ನ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ. ಎಚ್.ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. : - - – . - - .