ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಮೈತ್ರಿ ಸರ್ಕಾರ ಕಾರಣ : ಶಾಸಕ ಶ್ರೀರಾಮುಲು ಹೇಳಿಕೆ ವಿರುದ್ದ ಕಾಂಗ್ರೆಸ್ ದೂರು ದಾಖಲು.. ಧಾರವಾಡ,ಮೇ,9,2019(..): ಸಿ.ಎಸ್ ಶಿವಳ್ಳಿ ಅವರ ಸಾವಿಗೆ ಕಾಂಗ್ರೆಸ್ ಮೈತ್ರಿ ಸರ್ಕಾರ ಕಾರಣ ಎಂದು ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ದೂರು ನೀಡಿದೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿಗೆ ಇಂದು ತೆರಳಿದ ಸಂಸದ ವಿ.ಎಸ್ ಉಗ್ರಪ್ಪ ನೇತೃತ್ವದ ನಿಯೋಗ ಡಿಸಿ ದೀಪಾ ಚೋಳನ್ ಅವರಿಗೆ ದೂರು ನೀಡಿದೆ. ಪ್ರಜಾಪ್ರತಿನಿಧಿ ಕಾಯ್ದೆಯಡಿ ಶಾಸಕ ಶ್ರೀರಾಮುಲು ವಿರುದ್ದ ದೂರು ದಾಖಲಾಗಿದೆ. ಕಾರ್ಯಕ್ರಮವೊಂದರಲ್ಲಿ ಸಚಿವ ಸಿಎಸ್ ಶಿವಳ್ಳಿ ಸಾವಿಗೆ ಕಾಂಗ್ರೆಸ್, ಮೈತ್ರಿ ಸರ್ಕಾರವೇ ಕಾರಣ. ಅವರ ಕಿರುಕುಳದಿಂದಲೇ ಶಿವಳ್ಳಿ ಅವರು ಮೃತಪಟ್ಟಿದ್ದಾರೆ ಎಂದು ಶಾಸಕ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದರು. ಈ ಕುರಿತು ದೂರು ನೀಡಲು ನಿನ್ನೆ ರಾತ್ರಿ ಸಚಿವ ಡಿ.ಕೆ ಶಿವಕುಮಾರ್ ಸಂಸದ ಉಗ್ರಪ್ಪ ಜತೆ ಚರ್ಚೆ ನಡೆಸಿದ್ದರು ಎನ್ನಲಾಗಿದೆ. : – – ’- - - -