ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ‘ಕೈ’ ಶಾಸಕ ನಾಗೇಂದ್ರ… ಬೆಂಗಳೂರು,ಮೇ,9,2019(..): ಕಾಂಗ್ರೆಸ್ ವಿರುದ್ದ ಅಸಮಾಧಾನಗೊಂಡು ರಾಜೀನಾಮೆ ನೀಡಲು ಮುಂದಾಗಿರುವ ರಮೇಶ್ ಜಾರಕಿಹೊಳಿ ಬಂಡಾಯ ತಣ್ಣಗಾಗಿಸಲು ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರಯತ್ನ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಕಾಂಗ್ರೆಸ್ ಶಾಸಕ ನಾಗೇಂದ್ರ ಅವರು ಭೇಟಿ ಮಾಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. ಬಳ್ಳಾರಿ ಗ್ರಾಮಾಂತರ ಶಾಸಕ ನಾಗೇಂದ್ರ ಅವರು ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಸುಮಾರು 10 ನಿಮಿಷಗಳ ಕಾಲ ಚರ್ಚೆ ನಡೆಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಲ್ಲೇ ಇರಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡೋಣ ಎಂದು ಹೇಳಿ ಸಭೆಗೆ ತೆರಳಿದ್ದಾರೆ ಎನ್ನಲಾಗಿದೆ. ಆಪ್ತ ಎನ್.ಪಿ ಬಿರಾದರ್ ಅವರು ನಾಗೇಂದ್ರ ಅವರನ್ನ ಕರೆತಂದು ಭೇಟಿ ಮಾಡಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಮೇಶ್ ಜಾರಕಿಹೊಳಿ ಅಸಮಾಧಾನಗೊಂಡಿರುವ ಹಿನ್ನೆಲೆ ರಮೇಶ್ ಜಾರಕಿಹೊಳಿ ಜತೆ ಗುರುತಿಸಿಕೊಂಡಿರುವ ಶಾಸಕರನ್ನ ಭೇಟಿ ಮಾಡಿ ಸಿಎಂ ಹೆಚ್.ಡಿಕೆ ಚರ್ಚಿಸುತ್ತಿರುವುದು ಕುತೂಹಲಕ್ಕೆಕ ಕಾರಣವಾಗಿದೆ. : -- - – - –- .