‘ ಮಿ. ಕ್ಲೀನ್ ‘ ರಾಜೀವ್ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಮಾಡಿರುವ ಆರೋಪಕ್ಕೆ ನನ್ನ ಸಹಮತವಿಲ್ಲ : ವಿ.ಶ್ರೀನಿವಾಸ ಪ್ರಸಾದ್. ಮೈಸೂರು, ಮೇ 08, 2019 : ( .. ) ರಾಜೀವ್ ಗಾಂಧಿ ಭ್ರಷ್ಟಾಚಾರಿ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ನನ್ನ ವಿರೋಧ ಇದೆ ಎಂದು ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್ ಅಸಮಧಾನ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಮಾಧ್ಯಮಗಳ ಜತೆ ಮಾತನಾಡಿದ ಪ್ರಸಾದ್ ಹೇಳಿದಿಷ್ಟು…. ರಾಜೀವ್‌ಗಾಂಧಿ ಎಂದು ಸಹ ಭ್ರಷ್ಟಾಚಾರದ ಕೂಪಕ್ಕೆ ಸಿಲುಕಿದವರಲ್ಲ. ಭ್ರಷ್ಟಾಚಾರ ಆರೋಪ ಬಂದಾಗ ರಾಜಕೀಯ ಬಿಟ್ಟು ಎಲ್ಲಾದ್ರೂ ಹೋಗ್ತಿನಿ ಎಂದಿದ್ರು. ಅಂಥವರ ಬಗ್ಗೆ ದೆಹಲಿ ಹೈಕೋರ್ಟ್ ಸಹ ಆರೋಪ ಮುಕ್ತ ಮಾಡಿದೆ. ಇಂಥ ರಾಜೀವ್ ಗಾಂಧಿ ಬಗ್ಗೆ ಪ್ರಧಾನಿ ಮೋದಿ ಲಖ್ನೋದಲ್ಲಿ ಮಾತನಾಡಿ ಭ್ರಷ್ಟಚಾರದ ಆರೋಪ ಹೊರಸಿರುವುದು ಸರಿಯಲ್ಲ. ಆ ಮಾತು ಮೋದಿ ಬಾಯಿಂದ ಬರಬಾರಾದಿತ್ತು ಎಂದು ಪ್ರಸಾದ್ ವಿಷಾದ ವ್ಯಕ್ತಪಡಿಸಿದರು. ರಾಜೀವ್ ಗಾಂಧಿ ರಾಜಕೀಯಕ್ಕೆ ಬಂದಾಗಲೇ ಶುದ್ದ ಹಸ್ತರು ಅಂತ ಸಾಬೀತು ಮಾಡಿದ್ದಾರೆ. ನಾನು ಹಣ ಮಾಡಲು ಅಧಿಕಾರಕ್ಕೆ ಬಂದಿಲ್ಲ ಅಂತ ಹೇಳಿದ್ದಾರೆ. ಜನರು ನಮ್ಮ ಕುಟುಂಬದ ಬಗ್ಗೆ ಇಟ್ಟ ಗೌರವಕ್ಕೆ ಬಂದಿದ್ದೇನೆ ಎಂದು ಸ್ಪಷ್ಟವಾಗಿ ಹೇಳಿದ್ದರು. ಅಂತವರ ಬಗ್ಗೆ ವಾಜಪೇಯಿಯವರು ಸಹ ಒಳ್ಳೆ ಮಾತುಗಳನ್ನಾಡಿದ್ದಾರೆ. ಈಗ ಚುನಾವಣೆ ಸಂದರ್ಭದಲ್ಲಿ ಮೋದಿಯವರು ಆ ಮಾತು ಹೇಳಿದ್ದು ನನಗೂ ಬೇಸರವಾಯಿತು.ಉಗ್ರರ ಗುಂಡಿಗೆ ರಾಜೀವ್ ಗಾಂಧಿ ಬಲಿಯಾಗಿದ್ದು ದೇಶಕ್ಕೋಸ್ಕರ. ಅಂತವರ ತ್ಯಾಗದ ಬಗ್ಗೆ ಭ್ರಷ್ಟಾಚಾರದ ಮಾತನಾಡೋದು ಸರಿಯಲ್ಲ. ಮೋದಿಯವರು ರಾಜೀವ್ ಗಾಂಧಿ ಬಗ್ಗೆ ಮಾತನಾಡಿದ್ದು ನನಗೆ ಸರಿ ಅನ್ನಿಸಿಲ್ಲ. ಮೋದಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಮುಖಂಡ ವಿ.ಶ್ರೀನಿವಾಸ್ ಪ್ರಸಾದ್. ರಾಜೀವ್ ಗಾಂಧಿ ಮೀಸ್ಟರ್ ಕ್ಲೀನ್ ಅಂತ ಹೆಸರು ಪಡೆದಿದ್ದವರು. ಅವರನ್ನ ನಾನು ತುಂಬಾ ಹತ್ತಿರದಿಂದ ಬಲ್ಲೆ. ಅವರ ರಾಜಕೀಯ ಒಂದು ಉದಾಹರಣೆ. ಅಂಥವರ ಬಗ್ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡೋದು ಸರಿಯಲ್ಲ‌. ಮೋದಿ ಮಾತಿಗೆ ವಿರೋಧ ವ್ಯಕ್ತಪಡಿಸಿದ ವಿ.ಶ್ರೀನಿವಾಸ್ ಪ್ರಸಾದ್. – ’ , .