ಫುಡ್ ಪಾಯ್ಸನಿಂಗ್ : ಹಂಪಿ ಕನ್ನಡ ವಿವಿಯ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ. ಬಳ್ಳಾರಿ, ಮೇ 07, 2019 : (.. ) : ಹಾಸ್ಟೆಲ್ ನಲ್ಲಿ ಊಟ ಸೇವಿಸಿ ಅಸ್ವಸ್ಥಗೊಂಡ 40 ಕ್ಕೂ ಹೆಚ್ಚು ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯರೇ ಹಾಸ್ಟೆಲ್ ಊಟದ ಬಳಿಕ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವವರು. ಈ ಪೈಕಿ ಆರು ವಿದ್ಯಾರ್ಥಿನಿಯರ ಸ್ಥಿತಿ ಗಂಭೀರವಾಗಿದ್ದು ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ವಿದ್ಯಾರ್ಥಿನಿಯರು ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿಯರನ್ನು ಕಮಲಾಪುರ ಹಾಗೂ ಹೊಸಪೇಟೆ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. . . . 20 now40 . 6 . .