ಮೈಸೂರು: ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು… ಮೈಸೂರು,ಮೇ,3,2019(..): ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಐಚನಹಳ್ಳಿ ಗ್ರಾಮದ ನಿವಾಸಿ 25 ವರ್ಷದ ದ್ರುಪದ್ ಯಾದವ್ ಮೃತಪಟ್ಟ ಯುವಕ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹುಣಸೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. : - - -- - -