ಮಂಡ್ಯ ಲೋಕಸಭೆ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಸ್ಪರ್ಧಿಸುವಂತೆ ಆಗ್ರಹ. ಮಂಡ್ಯ,ಜನವರಿ,24,2024(..):ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರಲು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಈಗಾಗಲೇ ನಿರ್ಧರಿಸಿದ್ದು ಈ ಮಧ್ಯೆ ಇದೀಗ ಮಂಡ್ಯದಿಂದ ಹೆಚ್.ಡಿ ದೇವೇಗೌಡರ ಸ್ಪರ್ಧೆಗೆ ಆಗ್ರಹ ಕೇಳಿ ಬಂದಿದೆ. ಹೌದು ಮಂಡ್ಯ ಲೋಕಸಭೆ ಕ್ಷೇತ್ರದಿಂದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸ್ಪರ್ಧಿಸುವಂತೆ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷ ರಮೇಶ್ ಮನವಿ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ರಮೇಶ್, ಲೋಕಸಭೆ ಚುನಾವಣೆಗೆ ಹೆಚ್.ಡಿ ದೇವೇಗೌಡರು, ಹೆಚ್.ಡಿ ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು. ಈ ಸಂಬಂಧ ಜಿಲ್ಲಾ ನಾಯಕರ ಅಭಿಪ್ರಾಯ ಸಂಗ್ರಹ ಮಾಡಿದ್ದೇವೆ. ಸುದೀರ್ಘ ಚರ್ಚೆ ಮಾಡಿ ನಿರ್ಣಯ ಕೈಗೊಂಡಿದ್ದೇವೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಹೆಚ್.ಡಿ ದೇವೇಗೌಡರು ಸ್ಪರ್ಧಿಸಬೇಕು. ಇನ್ನ ಎರಡು ಮೂರು ದಿನದಲ್ಲಿ ಹೆಚ್.ಡಿ ದೇವೇಗೌಡರನ್ನ ಭೇಟಿ ಮಾಡಿ ಅಭಿಪ್ರಾಯ ತಿಳಿಸುತ್ತೇವೆ ಎಂದು ರಮೇಶ್ ತಿಳಿಸಿದ್ದಾರೆ. : – - -- -.