ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಶುಭ ಹಾರೈಸಿದ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು, ಜನವರಿ 22:,2024(..):ರಾಮಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಡಿಸಿಎಂ ಡಿಕೆ ಶಿವಕುಮಾರ್ ಶುಭ ಹಾರೈಸಿದ್ದಾರೆ. ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ರಾಜಕೀಯ ಕಾರ್ಯಕ್ರಮ ಎಂದು ಆಹ್ವಾನವನ್ನ ಕಾಂಗ್ರೆಸ್ ತಿರಸ್ಕರಿಸಿದ್ದು, ಹೀಗಾಗಿ ಕಾಂಗ್ರೆಸ್ ನಾಯಕರು ಭಾಗವಹಿಸಿಲ್ಲ. ಈ ಮಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆಗೆ ಶುಭಕೋರಿ ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ ಅರ್ಥಪೂರ್ಣ ಬದುಕು. ಅಯೋಧ್ಯೆಯ ಶ್ರೀ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಗೆ ಶುಭ ಹಾರೈಕೆಗಳು ಎಂದಿದ್ದಾರೆ. : - - - -