ನನಗೆ ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ: ಪ್ರಯತ್ನಿಸುತ್ತೇನೆ-ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ. ತುಮಕೂರು,ಜನವರಿ,17,2024(..):ನನಗೆ ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಅಯೋಧ್ಯೆಗೆ ಹೋಗಲು ಪ್ರಯತ್ನಿಸುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದರು. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹಂಗರಹಳ್ಳಿ‌ ವಿದ್ಯಾ ಚೌಡೇಶ್ವರಿ ಮಠಕ್ಕೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಭೇಟಿ ನೀಡಿ ದೇವರ ಆರ್ಶೀವಾದ ಪಡೆದುಕೊಂಡರು. ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್.ಡಿ ದೇವೇಗೌಡರು, ಶ್ರೀ ಬಾಲ ಮಂಜುನಾಥ ಶ್ರೀಗಳು ಶ್ರೀ ಕ್ಷೇತ್ರಕ್ಕೆ ಬರಲು ಆಹ್ವಾನ ನೀಡಿದ್ದರು. ವಿದ್ಯಾ ಚೌಡೇಶ್ವರಿಯ ಉತ್ತರಾಯಣ ಪುಣ್ಯಕಾಲ. ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ. ವರ್ಧಂತಿ ಉತ್ಸವ ಮತ್ತು ಅಮ್ಮನವರ ಚಿಕ್ಕಮ್ಮ ಜಾತ್ರೆಯು ಶಾಸ್ತ್ರೋಕ್ತವಾಗಿ ನಡೆದಿದೆ ಎಂದರು. ಹೆಚ್.ಡಿ ಕುಮಾರಸ್ವಾಮಿ ಅವರು ಶ್ರೀ ಚೌಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದ್ದಾರೆ. ನನಗೂ ಇಲ್ಲಿ ಹೋಗುವಂತೆ ಹೇಳಿದರು, ಹಾಗಾಗಿ ಬಂದು ಪೂಜೆ ಸಲ್ಲಿಸಿದ್ದೇನೆ. ನಾನು ಅಯೋಧ್ಯೆಗೆ ಹೋಗಬೇಕೆಂಬ ಇಚ್ಛೆ ಇದೆ. ಹೋಗುವ ಪ್ರಯತ್ನ ಮಾಡುತ್ತೇನೆ. ಆರೋಗ್ಯ ನೋಡಿಕೊಳ್ಳಬೇಕಾಗಿದೆ. ಈ ನಡುವೆ ನಿಜವಾಗಿಯೂ ಹೋಗುವ ಪ್ರಯತ್ನ ಮಾಡುತ್ತೇನೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು. : - - – - .