5 ವರ್ಷ ಸಿಎಂ ಕುರಿತು ಯತೀಂದ್ರ ಸಿದ್ದರಾಮಯ್ಯ ಹೇಳಿಕೆ: ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ.. ಬೆಂಗಳೂರು,ಜನವರಿ,17,2024(..):ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೇ ಸಿದ್ದರಾಮಯ್ಯ 5 ವರ್ಷಗಳ ಕಾಲವೂ ಸಿಎಂ ಆಗಿರಲಿದ್ದಾರೆ ಎಂಬ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಯತೀಂದ್ರ ಸಿದ್ದರಾಮಯ್ಯ ಆಸೆ ಪಡುವುದರಲ್ಲಿ ತಪ್ಪೇನಿದೆ. ಜನರ ಮುಂದೆ ಯತೀದ್ರ ಆ ರೀತಿ ಮಾತನಾಡದ್ದಾರೆ. ನಾನು ಕೂಡ ಜನರ ಭಾವನೆಗೆ ತಕ್ಕ ಹಾಗೆ ಮಾತನಾಡುತ್ತೇನೆ. ಇದನ್ನ ಬೇರೆ ಅರ್ಥದಲ್ಲಿ ಬಿಂಬಿಸುವುದು ಬೇಡ ಎಂದರು. ಯತೀಂದ್ರ ಸೂಕ್ಷ್ಮ ವ್ಯಕ್ತಿ. ಉದ್ಭವವಾಗುತ್ತಿರುವ ನಾಯಕ. ಸಿದ್ದರಾಮಯ್ಯ ನಮ್ಮ ಸಿಎಂ , ನಾನು ಕೆಪಿಸಿಸಿ ಅಧ್ಯಕ್ಷ . ನಾವಿಬ್ಬರೂ ಒಟ್ಟಿಗೆ ಸೇರಿ ಚುನಾವಣೆ ಎದುರಿಸುತ್ತೇವೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. … : - - -5 –- -