ಸಿಎಂ ವಿರುದ್ದ ಏಕವಚನ ಬಳಕೆ: ತಮ್ಮ ಹೇಳಿಕೆ ಸಮರ್ಥಿಸಿಕೊಂಡ ಅನಂತ ಕುಮಾರ್ ಹೆಗಡೆ. ಶಿರಸಿ,ಜನವರಿ,16,2024(..):ಸಿಎಂ ಸಿದ್ದರಾಮಯ್ಯ ವಿರುದ್ದ ಏಕವಚನ ಪದ ಬಳಕೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ಅನಂತಕುಮಾರ್ ಹೆಗಡೆ, ಇದು ನನ್ನ ವೈಯಕ್ತಿಕ ಹೇಳಿಕೆ. ಪಕ್ಷದ ಹೇಳಿಕೆ ಅಲ್ಲ . ಬಿ.ವೈ ವಿಜಯೇಂದ್ರ ಹೇಳಿರುವ ಮಾತು ಸರಿ ಇದೆ ಎಂದರು. ಅನಂತ್ ಕುಮಾರ್ ಹೆಗಡೆ ಆರೋಗ್ಯದ ಬಗ್ಗೆ ಗಮನ ಕೊಡಲಿ ಎಂಬ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಗೆ ಟಾಂಗ್ ನೀಡಿದ ಅವರು, ನನ್ನ ಆರೋಗ್ಯ ತುಂಬಾ ಚೆನ್ನಾಗಿದೆ. ಯಾವುದೇ ಸಂಶಯ ಬೇಡ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ ನನ್ನ ಟಿಕೆಟ್ ಬಗ್ಗೆ ಬೇರೆಯವರಿಗೆ ಯಾಕೆ ಚಿಂತೆ ಎಂದು ಪ್ರಶ್ನಿಸಿದರು. : –- - - - - .