ಕನ್ನಡದಲ್ಲೇ ಟ್ವೀಟ್ ಮಾಡಿ ಸಂಕ್ರಾಂತಿ ಹಬ್ಬದ ಶುಭಕೋರಿದ ಪ್ರಧಾನಿ ಮೋದಿ. ಬೆಂಗಳೂರು, ಜನವರಿ 15,2024(..):ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮವಾಗಿದ್ದು ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ ಟ್ವಿಟ್ ಮಾಡಿ ಸಂಕ್ರಾಂತಿ ಹಬ್ಬದ ಶುಭಕೋರಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಕನ್ನಡದಲ್ಲೇ ಶುಭಕೋರಿರುವ ಪ್ರಧಾನಿ ಮೋದಿ, ‘ಸಂಕ್ರಾಂತಿಯ ಶುಭಾಶಯಗಳು. ಪವಿತ್ರ ಸಂಕ್ರಾಂತಿ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತಸ ಮತ್ತು ಸಮೃದ್ಧಿಯನ್ನು ತರಲಿ. ಸುಗ್ಗಿಯ ಕಾಲವು ಸಮೃದ್ಧಿ ಮತ್ತು ಸಂತೋಷದಿಂದ ತುಂಬಲಿ ಎಂದು ಹಾರೈಸುತ್ತೇನೆ. ಮುಂಬರುವ ದಿನಗಳಲ್ಲಿ ನಿಮ್ಮ ಎಲ್ಲಾ ಆಕಾಂಕ್ಷೆಗಳು ಈಡೇರಲಿ’ ಎಂದು ಉಲ್ಲೇಖಿಸಿದ್ದಾರೆ. : - - – – - .