ಲೋಕಸಭೆ ಚುನಾವಣೆಗೆ ನಾನು ಮತ್ತು ನನ್ನ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ-ಸಚಿವ ಸತೀಶ್ ಜಾರಕಿಹೊಳಿ. ಬೆಂಗಳೂರು,ಜನವರಿ,4,2024(..):ಲೋಕಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ. ನನ್ನ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ. ಈ ಬಾರಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ. ಬೆಳಗಾವಿ, ಚಿಕ್ಕೋಡಿ ಎರಡೂ ಕ್ಷೇತ್ರಗಳಲ್ಲಿಯೂ ನಾನಾಗಲಿ, ನನ್ನ ಕುಟುಂಬದಿಂದಾಗಲಿ ಯಾರೂ ಸ್ಪರ್ಧಿಸಲ್ಲ. ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು. ಅಂತಿಮವಾಗಿ ಹೈಕಮಾಂಡ್ ಏನು ಹೇಳುತ್ತದೆ ನೋಡಬೇಕು ಎಂದರು. : - - - – - .