ನಿಗಮ ಮಂಡಳಿಗಳಲ್ಲಿ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ-ಡಿಸಿಎಂ ಡಿ.ಕೆ ಶಿವಕುಮಾರ್. ಬೆಂಗಳೂರು, ಡಿಸೆಂಬರ್​ 30,2023(..):ನಿಗಮ ಮಂಡಳಿಗಳ ನೇಮಕ ವೇಳೆ ಶಾಸಕರ ಸಂಖ್ಯೆಯಷ್ಟೇ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಸಂಕ್ರಾಂತಿ ಒಳಗೆ ನಿಗಮಮಂಡಳಿಗಳ ನೇಮಕ ಮಾಡಲಾಗುತ್ತದೆ. ನಾವು ನೀಡಿದ ಪಟ್ಟಿಯನ್ನು ವರಿಷ್ಠರು ಒಪ್ಪಿಕೊಂಡಿದ್ದಾರೆ. ಕಾರ್ಯಕರ್ತರ ಪಟ್ಟಿ ಬಂದಿದೆ, ಈ ಬಗ್ಗೆ ಚರ್ಚೆ ಮಾಡಲು 10ನೇ ತಾರೀಕು ಸಭೆ ಕರೆದಿದ್ದೇವೆ. ಬ್ಲಾಕ್ ಅಧ್ಯಕ್ಷರ ಜೊತೆಯೂ ಚರ್ಚೆ ಮಾಡಿ ಅಂತಿಮಗೊಳಿಸುತ್ತೇವೆ ಎಂದು ತಿಳಿಸಿದರು. ಇನ್ನು ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ ಶಿವಕುಮಾರ್, ಜನವರಿ 4ರಂದು ನಾನು ಮತ್ತು ಮುಖ್ಯಮಂತ್ರಿಗಳು ದೆಹಲಿಗೆ ಹೋಗುತ್ತೇವೆ. ಪಕ್ಷದ ಸಭೆ ಇದೆ, ಚರ್ಚೆ ಮಾಡುವುದಿದೆ. ನಮ್ಮೆಲ್ಲಾ ಮಂತ್ರಿಗಳು ವರದಿ ನೀಡಿದ್ದಾರೆ. ಅಭ್ಯರ್ಥಿಗಳ ಬಗ್ಗೆ ಸರ್ವೆ ಮಾಡಬೇಕು, ಕ್ಷೇತ್ರಗಳಿಗೆ ಹೋಗುತ್ತೇವೆ ಎಂದು ತಿಳಿಸಿದರು. : - – – -