ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ. ಅಯೋಧ್ಯೆ, ಡಿಸೆಂಬರ್ ,30,2023(..):ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಎರಡು ಅಮೃತ್ ಭಾರತ್ ರೈಲುಗಳು ಹಾಗೂ 6 ವಂದೇ ಭಾರತ್ ರೈಲುಗಳಿಗೆಚಾಲನೆ ನೀಡಿದರು. ಅಯೊಧ್ಯೆಯ ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಎರಡು ಅಮೃತ್ ಭಾರತ್ ರೈಲುಗಳು ಮತ್ತು 6 ವಂದೇ ಭಾರತ್ ರೈಲುಗಳಿಗೆ ಮೋದಿ ಚಾಲನೆ ನೀಡಿದರು. ದೇಶದ ಇತರೆಡೆಗಳ ವಂದೇ ಭಾರತ್ ರೈಲುಗಳಿಗೂ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದರು. ಇದರಲ್ಲಿ ಕರ್ನಾಟಕದ ಮಂಗಳೂರಿನಿಂದ ಗೋವಾಕ್ಕೆ ತೆರಳುವ, ಬೆಂಗಳೂರಿನಿಂದ ಕೊಯಮತ್ತೂರಿಗೆ ತೆರಳುವ ವಂದೇ ಭಾರತ್ ರೈಲುಗಳು ಮತ್ತು ಮಾಲ್ಡಾ ಬೆಂಗಳೂರು ಅಮೃತ್ ಭಾರತ್ ಎಕ್ಸ್​ಪ್ರೆಸ್ ಕೂಡ ಸೇರಿವೆ. ಅಯೋಧ್ಯೆ – ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್, ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ – ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ – ದೆಹಲಿ ವಂದೇ ಭಾರತ್ ಎಕ್ಸ್‌ ಪ್ರೆಸ್, ಕೊಯಮತ್ತೂರು-ಬೆಂಗಳೂರು ಕಂಟೋನ್ಮೆಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್, ಜಲ್ನಾ – ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್, ಮಂಗಳೂರು – ಮಡ್ಗಾಂವ್ ವಂದೇ ಭಾರತ್ ಎಕ್ಸ್‌ ಪ್ರೆಸ್ ಗಳಿಗೆ ಚಾಲನೆ ದೊರೆಯಿತು. : -- - .