ಎರಡು ಕಾರುಗಳ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು. ಬೆಳಗಾವಿ, ಡಿಸೆಂಬರ್,.29,2023(..):ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೈಲಹೊಂಗಲ ತಾಲೂಕಿನ ಇಂಚಲ ಬಳಿ ಈ ಘಟನೆ ನಡೆದಿದೆ. ಮಂಗಲಾ ಭರಮನಾಯ್ಕರ್(50) ಹಾಗೂ ಶ್ರೀಶೈಲ(40) ಮೃತಪಟ್ಟವರು. ಘಟನೆಯಲ್ಲಿ ನಾಲ್ವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮುರಗೋಡ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - - - .