ಪಾಳು ಬಿದ್ದ ಮನೆಯಲ್ಲಿ ನಿಗೂಢವಾಗಿ ಐದು ಅಸ್ಥಿಪಂಜರಗಳು ಪತ್ತೆ. ಚಿತ್ರದುರ್ಗ,ಡಿಸೆಂಬರ್​, 29,2023(..):ಚಿತ್ರದುರ್ಗ ನಗರದ ಚಳ್ಳಕೆರೆ ಗೇಟ್​ ಸಮೀಪವಿರುವ ಜೈಲ್ ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ನಿಗೂಢವಾಗಿ ಐದು ಅಸ್ಥಿಪಂಜರ ಪತ್ತೆ ಆಗಿದ್ದು ಇದು ಆತ್ಮಹತ್ಯೆಯೋ ಅಥವಾ ಕೊಲೆಯೂ ಎಂಬ ಅನುಮಾನ ವ್ಯಕ್ತವಾಗಿದೆ. ಸ್ಥಳೀಯರೊಬ್ಬರು ನೀಡಿದ ಮಾಹಿತಿ ಅಧರಿಸಿ ಪೊಲೀಸರು ಪಾಳುಬಿದ್ದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಈ ಅಸ್ಥಿಪಂಜರಗಳು ಸಿಕ್ಕಿವೆ. ಸ್ಥಳಕ್ಕೆ ಡಿವೈಎಸ್‌ಪಿ ಪಿ.ಅನಿಲ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪವನ್ ಕುಮಾರ್ ಎಂಬುವರು ಚಿತ್ರದುರ್ಗ ಬಡಾವಣೆ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಮನೆಯಲ್ಲಿ ಪವನ್ ಕುಮಾರ್ ಸಂಬಂಧಿ ಜಗನ್ನಾಥರೆಡ್ಡಿ ಮತ್ತು ಕುಟುಂಬ ವಾಸವಾಗಿದ್ದರು. ಜಗನ್ನಾಥರೆಡ್ಡಿ, ಪತ್ನಿ ಪ್ರೇಮಕ್ಕ, ಪುತ್ರಿ ತ್ರಿವೇಣಿ, ಪುತ್ರ ಕೃಷ್ಣರೆಡ್ಡಿ, ನರೇಂದ್ರರೆಡ್ಡಿ ವಾಸವಾಗಿದ್ದರು ಎನ್ನಲಾಗಿದೆ. ಮೃತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಇಲ್ಲವೇ ಕೊಲೆಯಾಗಿದ್ದಾರೆಯೇ? ಎಂಬುವುದರ ಕುರಿತು ತಿಳಿದು ಬರಬೇಕಿದೆ. ಸದ್ಯ ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್ ಪರೀಕ್ಷೆಗೆ ಕಳಿಸಲು ತೀರ್ಮಾನಿಸಲಾಗಿದೆ. ಪೊಲೀಸರ ಸೂಕ್ತ ತನಿಖೆ ಬಳಿಕವಷ್ಟೇ ಐದು ಅಸ್ಥಿಪಂಜರಗಳ ಬಗ್ಗೆ ಮಾಹಿತಿ ತಿಳಿದು ಬರಲಿದೆ. : - – - – .