5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ. ಬೆಂಗಳೂರು,ಡಿಸೆಂಬರ್,26,2023(..):ರಾಜ್ಯ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವೇಳೆ ಡಿಸಿಎಂ ಡಿ.ಕೆ ಶಿವಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಉಪಸ್ಥಿತರಿದ್ದರು. ಈ ಯೋಜನೆಯಡಿ ಪದವೀಧರರಿಗೆ 3000, ಡಿಪ್ಲೋಮಾ ಪದವೀಧರರಿಗೆ 1500 ರೂ ಮಾಸಿಕ ಭತ್ಯೆ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಪದವೀಧರರಿಗೆ ಈ ಅವಕಾಶವಿದ್ದು, ಸೇವಾಸಿಂಧು, ಕರ್ನಾಟಕ ಒನ್, ಬಾಪೂಜಿ ಸೇವಾ ಕೇಂದ್ರದಲ್ಲಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಎರಡು ವರ್ಷಗಳ ಕಾಲ ರಾಜ್ಯ ಸರ್ಕಾರ ಯುವನಿಧಿ ಭತ್ಯೆ ನೀಡಲಿದೆ. ಕೆಲಸ ಸಿಕ್ಕ ತಕ್ಷಣ ಯುವನಿಧಿ ಯೋಜನೆ ಹಣ ಸ್ಥಗಿತಗೊಳ್ಳಲಿದೆ. : - – 5th –- -