ರಾಜ್ಯದಲ್ಲಿ ಇಂದು 104 ಜನರಿಗೆ ಕೋವಿಡ್ ದೃಢ: ಆರೋಗ್ಯ ಇಲಾಖೆ ಮಾಹಿತಿ. ಬೆಂಗಳೂರು,ಡಿಸೆಂಬರ್,23,2023(..):ರಾಜ್ಯದಲ್ಲಿ ಕೋವಿಡ್ ‍ಪ್ರಕರಣ ಹೆಚ್ಚುತ್ತಿದ್ದು ಇಂದು 104 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ. 104 ಜನರಿಗೆ ಕೋವಿಡ್ ತಗುಲಿದ್ದು, ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 271ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 85 ಮಂದಿಗೆ ಕೋವಿಡ್ ಪಾಸಿಟಿವ್ ಪತ್ತೆಯಾಗಿದ್ದು, ಇಲ್ಲಿ ಸಕ್ರಿಯ ಪ್ರಕರಣಗಳು 234ಕ್ಕೆ ಏರಿಕೆಯಾಗಿದೆ. ಇಂದು ಕೋವಿಡ್‍ ಸಾವಿನ ಪ್ರಕರಣ ಕಂಡು ಬಂದಿಲ್ಲ. ಇಂದು 8 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೋವಿಡ್ ಪಾಸಿಟಿವಿಟಿ ದರ ಶೇ. 5.90 ರಷ್ಟು ಇದೆ. 162 ಮಂದಿ ಹೋಮ್ ಐಸೋಲೇಷನ್ ನಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. : 104 - –