ಹಿಜಾಬ್ ವಿಷಯ ಹಠಾತ್ ಮುನ್ನೆಲೆಗೆ: ಇದರ ಹಿಂದೆ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ-ಆರ್.ಅಶೋಕ್ ಕಿಡಿ. ಬೆಂಗಳೂರು,ಡಿಸೆಂಬರ್,23,2023(..):ಸಿಎಂ ಸಿದ್ದರಾಮಯ್ಯ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಹಿಂಪಡೆಯುವುದಾಗಿ ಘೋಷಿಸಿದ ಬೆನ್ನಲ್ಲೇ ಇದೀಗ ಬಿಜೆಪಿ ನಾಯಕರು ಈ ಸಂಬಂಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವುದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ಆರೋಪಿಸಿದ್ದಾರೆ. ಹಾಗೆಯೇ ಮುಂದುವರೆದು, ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ. : - – -.