ಡಾ.ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡುವಂತೆ ಆಗ್ರಹ: ಚಾಮುಂಡಿ ಬೆಟ್ಟದಲ್ಲಿ ಈಡುಗಾಯಿ ಒಡೆದ ಅಭಿಮಾನಿಗಳು. ಮೈಸೂರು,ಡಿಸೆಂಬರ್,21,2023(..):ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನ ಕಣಕ್ಕಿಳಿಸುವಂತೆ ಆಗ್ರಹಿಸಿ ಇಂದು ಚಾಮುಂಡಿ ಬೆಟ್ಟದಲ್ಲಿ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು. ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಚಾಮುಂಡಿ ಬೆಟ್ಟದ ಪಾದದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಅಭಿಮಾನಿಗಳು 101 ತೆಂಗಿನಕಾಯಿ ಒಡೆದರು. ಈ ವೇಳೆ ಮಾತನಾಡಿದ ಮೈಸೂರು ಮಹಾನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ, ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಯತೀಂದ್ರ ಸಿದ್ದರಾಮಯ್ಯಗೆ ಕೊಡಬೇಕು. ಯತೀಂದ್ರ ಸಿದ್ದರಾಮಯ್ಯ ಶಾಸಕರಾಗಿ ಉತ್ತಮ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ನೀಡದ್ರೂ ಕಾಂಗ್ರೆಸ್ ಗೆಲ್ಲುತ್ತದೆ. ಯತೀಂದ್ರ ಸಿದ್ದರಾಮಯ್ಯಗೆ ಟಿಕೆಟ್ ನೀಡಿದ್ರೆ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತೇವೆ. ಪ್ರತಾಪ್ ಸಿಂಹ ಕೇವಲ ಧರ್ಮಗಳು, ಜಾತಿಗಳ ನಡುವೆ ಎತ್ತಿ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ನಿಂದ ಯಾರೇ ನಿಂತರೂ ಗೆದ್ದೇ ಗೆಲ್ಲುತ್ತೇನೆ ಎಂಬ ಅಹಂಕಾರದ ಮಾತನ್ನ ಹೇಳುತ್ತಿದ್ದಾರೆ. ಪ್ರತಾಪ್ ಸಿಂಹ ಅಹಂಕಾರ ಈ ಭಾರಿ ಕೊನೆಯಾಗುತ್ತೆ. ಯತೀಂದ್ರ ಸಿದ್ದರಾಮಯ್ಯ ಗೆಲುವು ಶತಸಿದ್ಧ ಎಂದರು. : – – . --