ಎಂಎಲ್ ಸಿ ಸೂರಜ್ ರೇವಣ್ಣಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್. ಬೆಂಗಳೂರು, ಡಿಸೆಂಬರ್ 20,2023(..):ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಸೂರಜ್ ರೇವಣ್ಣ ಅವರನ್ನು ಅನರ್ಹಗೊಳಿಸುವಂತೆ ಕೋರಿ ವಕೀಲ ದೇವರಾಜೇಗೌಡ ಎಂಬುವವರು ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನ ಇದೀಗ ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ ಇಂದು ವಜಾಗೊಳಿಸಿದೆ. ಈ ಮೂಲಕ ಎಂಎಲ್ ಸಿ ಸೂರಜ್ ರೇವಣ್ಣಗೆ ಬಿಗ್ ರಿಲೀಫ್​ ಸಿಕ್ಕಿದೆ. : – - – .