ಕೋವಿಡ್ ಭೀತಿ: ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್ ಲೈನ್ಸ್ ಇಲ್ಲ- ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್. ಬೆಂಗಳೂರು, ಡಿಸೆಂಬರ್, 20,2023(..):ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಆಲರ್ಟ್ ಆಗಿರುವ ಆರೋಗ್ಯ ಇಲಾಖೆ ಈಗಾಗಲೇ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ. ಹೊಸವರ್ಷಾಚರಣೆ ವೇಳೆಯೇ ಕೋವಿಡ್ ಭೀತಿ ಎದುರಾಗಿದೆ. ಈ ಕುರಿತು ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಪ್ರತ್ಯೇಕ ಗೈಡ್​ಲೈನ್ಸ್​ ಇರಲ್ಲ. ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊವಿಡ್​ ಪ್ರಕರಣ ಹೆಚ್ಚಳವಾಗಿಲ್ಲ. ಹೀಗಾಗಿ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಬಿಬಿಎಂಪಿ , ನಮ್ಮ ಕ್ಲಿನಿಕ್ ಕೋವಿಡ್ ಸಿದ್ಧತೆಗಳ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ಕೇಳಿದೆ. ಪಾಲಿಕೆ ವ್ಯಾಪ್ತಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿದ್ಧತೆ ಮಾಡಿಕೊಳ್ಳಲು ಸೂಚನೆ ನೀಡಿದೆ. ಪಾಲಿಕೆ ವ್ಯಾಪ್ತಿಯಲ್ಲಿ , ಕೇಸ್ ಮೇಲೆ ನಿಗಾ ಇಡಲು ಬಿಬಿಎಂಪಿ ಮುಂದಾಗಿದೆ. ಕೋವಿಡ್ ಸಂಬಂಧ ಆರೋಗ್ಯಾಧಿಕಾರಿಗಳ ಸಭೆ ನಡೆಸಲು ಸೂಚನೆ ನೀಡಿದ್ದು, ಹೊಸವರ್ಷಾಚರಣೆಗೆ ಯಾವುದೇ ಪ್ರತ್ಯೇಕ ಗೈಡ್ ಲೈನ್ಸ್ ಇರುವುದಿಲ್ಲ ಎಂದರು. : - - – - – –