ಬರಹಗಾರ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಒಲಿದ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ನವದೆಹಲಿ,ಡಿಸೆಂಬರ್,20,2023(..):ಕನ್ನಡಿಗರಾದ ಬರಹಗಾರ, ವಾಗ್ಮಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-2023 ಪ್ರಕಟವಾಗಿದೆ. ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆಯಾಗಿದೆ. ಮಾರ್ಚ್ 12 ರಂದು ದೆಹಲಿಯ ಕಾಮಿನಿ ಸಭಾಂಗಣದಲ್ಲಿ ಲಕ್ಷ್ಮೀಶ ತೋಳ್ಪಾಡಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿತರಿಸಲಾಗುತ್ತದೆ. ಒಂದು ಲಕ್ಷ ನಗದು ಹಾಗೂ ಪ್ರಶಸ್ತಿ ವಿತರಣೆ ಮಾಡಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. : – – .