ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಂತ್ರಸ್ತೆ ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ. ಬೆಳಗಾವಿ, ಡಿಸೆಂಬರ್,19,2023(..):ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಂತ್ರಸ್ತೆ ಕುಟುಂಬಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು 5 ಲಕ್ಷ ರೂ. ಪರಿಹಾರದ ಚೆಕ್ ವಿತರಿಸಿದ್ದಾರೆ. ಸಿಎಂ ನಿಧಿಯಿಂದ 5 ಲಕ್ಷ ರೂ. ಪರಿಹಾರದ ಚೆಕ್​ವಿತರಿಸಲಾಗಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 5 ಲಕ್ಷ ರೂ. ಪರಿಹಾರದ ಜೊತೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದಿಂದ 2 ಎಕರೆ ಜಮೀನು ಮಂಜೂರಾಗಿದೆ ಎಂದು ತಿಳಿಸಿದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ಒಪ್ಪಿಸಿದೆ. ತನಿಖೆ ಬಗ್ಗೆ ಯಾವುದೇ ಸಂಶಯ ಬೇಡ ಎಂದು ಸಿಐಡಿಗೆ ಕೊಟ್ಟಿದ್ದಾರೆ. ಇಂತಹದೊಂದು ಘಟನೆ ಆಗಬಾರದಿತ್ತು ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು. : -- - - - -