ಬಿಜೆಪಿಯವರು ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ- ಸಚಿವ ಮಧು ಬಂಗಾರಪ್ಪ ಬೆಳಗಾವಿ, ಸೆಪ್ಟೆಂಬರ್‌ 11,2024 (..):ಸಿಎಂ ಸಿದ್ದರಾಮಯ್ಯರನ್ನ ಕೆಳಗಿಳಿಸಲು ಬಿಜೆಪಿ ಕುತಂತ್ರ ಮಾಡುತ್ತಿದೆ. ಬಿಜೆಪಿಯವರು ಇದರಲ್ಲಿ ನಿಸ್ಸೀಮರು ಇವತ್ತಿನವರೆಗೂ ಅವರ ಹಣೆಬರಹಕ್ಕೆ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಸಿದ್ದರಾಮಯ್ಯ ಸಾಹೇಬರನ್ನು ಸಿಎಂ ಸ್ಥಾನದಿಂದ ಇಳಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿ ಮುಂದುವರೆಯಬೇಕು ಎಂಬುದು ನಮ್ಮೆಲ್ಲರ ಆಸೆ. ಹೀಗಾಗಿ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಬಿಜೆಪಿ ಮತ್ತು ಜೆಡಿಎಸ್ ಗೆ ಸಿಎಂ ಸಿದ್ದರಾಮಯ್ಯರನ್ನ ಕಂಡರೆ ಭಯ. ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ ಎಂದರು. ದೀಪಾವಳಿ ಹಬ್ಬದೊಳಗೆ ಸರ್ಕಾರ ಪತನವಾಗುತ್ತೆ ಎಂಬ ವಿಧಾನಪರಿಷತ್ ಸದಸ್ಯ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ, ಬಿಜೆಪಿಯವರು ಇನ್ನೂ ನಾಲ್ಕು ದೀಪಾವಳಿ ಕಾಯಬೇಕು. ಅಲ್ಲಿಯವರೆಗೆ ಮನೆಯಲ್ಲಿ ದೀಪಾವಳಿ ಮಾಡಲು ಹೇಳಿ ಎಂದು ಟಾಂಗ್ ಕೊಟ್ಟರು. : , , , ,