ಕೋವಿಡ್ ಹೊಸ ತಳಿ ಸಂಬಂಧ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚನೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು, ಡಿಸೆಂಬರ್ 17, 2023 (..): ಕೋವಿಡ್ ಹೊಸ ತಳಿ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಪ್ರತಿಕ್ರಿಯಿಸಿದ್ದಾರೆ. ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರು ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ಮಹಿಳೆಯನ್ನು ವಿವಿಸ್ತ್ರಗೊಳಿಸಿ ಹಲ್ಲೆ ಪ್ರಕರಣ ಸಂಬಂಧ ಗದಗ್ ನಲ್ಲಿ ಸಿಎಂ ಪ್ರತಿಕ್ರಿಯೆ ನೀಡಿ, ಉನ್ನತ ತನಿಖೆಗೆ ವಹಿಸಲು ನಾನು ಸಿದ್ದ. ನಮ್ಮ ಪೊಲೀಸರು ತನಿಖೆ ಮಾಡಲು ಸಮರ್ಥರಿದ್ದಾರೆ. ಬೆಳಗಾವಿಯಲ್ಲಿ ಮಹಿಳೆ ಮೇಲಾದ ದೌರ್ಜನ್ಯ ಪ್ರಕರಣವನ್ನು ಎಲ್ಲಿಗೆ ಬೇಕಾದರೂ ವಹಿಸಲು ಸಿದ್ದ ತನಿಖೆಯಾಗಿ ತಪ್ಪಿತಸ್ಥ ರಿಗೆ ಶಿಕ್ಷೆಯಾಗಬೇಕು ಎಂದು ಸಿಎಂ ಹೇಳಿದ್ದಾರೆ. ಬಡ್ಡಿ ಮನ್ನಾ: ಕ್ಯಾಶ್ ಕಾರ್ಡ್ ಬ್ಯಾಂಕ್ ಸೊಸೈಟಿಗಳಲ್ಲಿ ರೈತರಿಗೆ ನೀಡಿರುವ ಸಾಲದ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.