ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದ ಬಿಜೆಪಿ ಸತ್ಯ ಶೋಧನಾ ತಂಡ. ಬೆಳಗಾವಿ, ಡಿಸೆಂಬರ್, 16,2023(..):ಬೆಳಗಾವಿ ತಾಲ್ಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಮ್ಸ್ ಆಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ ನೀಡಿದೆ. ಬಿಮ್ಸ್ ಆಸ್ಪತ್ರೆಗೆ ಬಿಜೆಪಿ ಸತ್ಯ ಶೋಧನಾ ತಂಡ ಭೇಟಿ ನೀಡಿ ಸಂತ್ರಸ್ತ ಮಹಿಳೆಯ ಆರೋಗ್ಯ ವಿಚಾರಿಸಿ ಸಾಂತ್ವನ ಹೇಳಿದೆ. ಬಿಜೆಪಿ ಸತ್ಯ ಶೋಧನಾ ತಂಡದಲ್ಲಿ ಸಂಸದರಾದ ಅಪರಾಜಿತ್ ಸಾರಂಗಿ, ಸುನೀತಾ ದುಗ್ಗಲ್, ರಂಜಿತಾ ಕೋಳಿ, ಲಾಕೆಟ್ ಚಟರ್ಜಿ, ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಇದ್ದಾರೆ. ಸಂತ್ರಸ್ತ ಮಹಿಳೆಯಿಂದ ಘಟನೆ ಬಗ್ಗೆ ಮಾಹಿತಿ ಪಡೆದಿದ್ದು ಸತ್ಯಶೋಧನಾ ತಂಡಕ್ಕೆ ಮಂಗಳ ಅಂಗಡಿ ಹಾಗೂ ಶಶಿಕಲಾ ಜೊಲ್ಲೆ ಅವರು ಸಾಥ್ ನೀಡಿದ್ದಾರೆ . ಇನ್ನು ಬಿಜೆಪಿ ನಿಯೋಗ ಘಟನಾ ಸ್ಥಳ ವಂಟಮೂರಿ ಹಾಗೂ ಕಾಕತಿ ಪೊಲೀಸ್ ಠಾಣೆಗೆ ಭೇಟಿ ನೀಡಲಿದೆ. : - - - - -- - -’