ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲು ಶಾಸಕ ಯತ್ನಾಳ್ ಆಗ್ರಹ. ವಿಜಯಪುರ, ಡಿಸೆಂಬರ್,16,2023(..):ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರಿಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೈಸೂರಿನ ವಿಮಾನ ನಿಲ್ದಾಣಕ್ಕೆ ಮಹಾಪ್ರಭುಗಳಾದ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಅವರ ಹೆಸರನ್ನು ಕರ್ನಾಟಕ ಸರ್ಕಾರ ಶಿಫಾರಸ್ಸು ಮಾಡಬೇಕು. ಅವರ ಕೊಡುಗೆ ಕರ್ನಾಟಕ ಹಾಗು ಭಾರತಕ್ಕೆ ಅಪಾರವಾದದ್ದು ಎಂದು ಒತ್ತಾಯಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ಸೇರಿದಂತೆ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಹಾಗೆಯೇ ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವಂತೆ ಶಾಸಕ ಪ್ರಸಾದ್ ಅಬ್ಬಯ್ಯ ಪ್ರಸ್ತಾಪ ಮಾಡಿದ್ದರು. ಆದರೆ ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. : - - –- .