ಭ್ರೂಣ ಹತ್ಯೆ ಪ್ರಕರಣ ಎಸ್ ಐಟಿ ತನಿಖೆಗೆ ವಹಿಸಿ-ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ. ಬೆಳಗಾವಿ,ಡಿಸೆಂಬರ್,14,2023(..):ರಾಜ್ಯದಲ್ಲಿ ನಡೆದಿದ್ದ ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನ ಎಸ್ ಐಟಿ ತನಿಖೆಗೆ ವಹಿಸಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ವಿಪಕ್ಷ ನಾಯಕ ಆರ್.ಅಶೋಕ್, ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿ ಎಸ್.ಐಟಿ ತನಿಖೆಗೆ ವಹಿಸಲಿ ಎಂದು ಆಗ್ರಹಿಸಿದರು. ಮಂಡ್ಯದ ಆಲೆಮನೆಯೊಂದರಲ್ಲಿ ಹೆಣ್ಣು ಭ್ರೂಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದು ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. : - - – - .