ಭ್ರೂಣ ಹತ್ಯೆ ಪ್ರಕರಣ: ಕಾರ್ಯಪಡೆ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ- ಆರೋಗ್ಯ ಸಚಿವ ದಿನೇಶ್ ಗುಂಡೂರಾವ್. ಬೆಳಗಾವಿ,ಡಿಸೆಂಬರ್,14,2023(..):ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಪಡೆ ಮತ್ತು ಮೇಲ್ವಿಚಾರಣಾ ಸಮಿತಿ ರಚನೆ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಹೆಣ್ಣುಭ್ರೂಣ ಹತ್ಯೆ ಪ್ರಕರಣವನ್ನ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ವಿಪಕ್ಷನಾಯಕ ಆರ್.ಅಶೋಕ್, ಎಸ್ ಐಟಿ ತನಿಖೆಗೆ ಆಗ್ರಹಿಸಿದರು. ಈ ವೇಳೆ ಮಾತನಾಡಿದ ಆರೋಗ್ಯಸಚಿವ ದಿನೇಶ್ ಗುಂಡೂರಾವ್, ಪ್ರಕರಣವನ್ನು ರಾಜ್ಯ ಸರ್ಕಾರ ಮಾನಿಟರ್ ಮಾಡಲಿದೆ. ಕಾರ್ಯಪಡೆ ಮತ್ತು ಮೇಲ್ವಿಚಾರಣಾ ಸಮಿತಿಯನ್ನು ಮಾಡುತ್ತೇವೆ ಎಂದು ಹೇಳಿದರು. ಈ ಕುರಿತು ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ ಪಾಟೀಲ್, ಕಠಿಣ ಕ್ರಮ ಕೈಗೊಳ್ಳಲು ಕಾನೂನಿಗೆ ತಿದ್ದುಪಡಿ ತರುತ್ತೇವೆ.ಮುಂದಿನ ಅಧಿವೇಶನದಲ್ಲಿ ಕಾನೂನಿಗೆ ತಿದ್ದುಪಡಿ ಮಾಡಿ ವಿಧೇಯಕ ಮಂಡಿಸಲಾಗುವುದು ಎಂದು ಹೇಳಿದರು. : - – - - - .