ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು-ಸಿಎಂ ಸಿದ್ದರಾಮಯ್ಯ. ಬೆಳಗಾವಿ,ಡಿಸೆಂಬರ್,11,2023(..):ಪ್ರೀತಿಸಿದ ಯುವತಿ ಜೊತೆ ಯುವಕ ಓಡಿ ಹೋಗಿದ್ದಕ್ಕೆ ಯುವಕನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಟ್ವಟ್ಟರ್ ನಲ್ಲಿ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವುದು ಅತ್ಯಂತ ಅಮಾನವೀಯ. ಇದರಿಂದ ಇಡೀ ಸಮಾಜವೇ ತಲೆತಗ್ಗಿಸುವಂತಾಗಿದೆ. ಇಂತಹ ಹೀನ ಕೃತ್ಯಗಳನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರಕರಣದ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗುವಂತೆ ಕ್ರಮವಹಿಸುವ ಮೂಲಕ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ಸಂಪೂರ್ಣ ಹೊಣೆ ನಮ್ಮದು ಎಂದು ಭರವಸೆ ನೀಡಿದ್ದಾರೆ. : – –-- – .