ಹೆಚ್.ಡಿ ದೇವೇಗೌಡರು ನಮ್ಮ ಮಾತು ಕೇಳದಿದ್ರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ- ಸಿಎಂ ಇಬ್ರಾಹಿಂ ಬೆಂಗಳೂರು, ಡಿಸೆಂಬರ್, 8,2023(..):ಲೋಕಸಭೆ ಚುನಾವಣೆಗೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ಅಸಮಾಧಾನಗೊಂಡಿರುವ ಸಿಎಂ ಇಬ್ರಾಹಿಂ, ಇದೀಗ ಮತ್ತೆ ಕಿಡಿಕಾರಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಇಬ್ರಾಹಿಂ, ಡಿಸೆಂಬರ್​ 11ರ ಬಳಿಕ ನಾವು ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ನಮಗೆ ಮೂರನೇ ಶಕ್ತಿಯಾಗಿ ಬೆಳೆಯಲು ಅವಕಾಶವಿದೆ. ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಸ್ಟೇಟ್ ಮೆಂಟ್ ನೋಡಿ ಬೇಸರವಾಯಿತು ಕುಮಾರಸ್ವಾಮಿ ಅವರೇ ಮೊದಲು ನಿಮ್ಮ ಆರೋಗ್ಯ ನೋಡಿಕೊಳ್ಳಿ. ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ, ಸ್ವಂತ ನಿರ್ಧಾರ ತೆಗೆದುಕೊಂಡಿಲ್ಲ. ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್‌ ನ​ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡರ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದರು. : - - – - –