ಕಾಲೇಜು ಕಟ್ಟಡದಿಂದ ಹಾರಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ. ಶಿವಮೊಗ್ಗ,ಡಿಸೆಂಬರ್,5,2023(..):ಕಾಲೇಜು ಕಟ್ಟಡದಿಂದ ಹಾರಿ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ಶಿವಮೊಗ್ಗದ ಶರಾವತಿ ನಗರದಲ್ಲಿರುವ ಆದಿಚುಂಚನಗಿರಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮೇಘಶ್ರೀ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೃತ ಮೇಘಶ್ರೀ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಚೆನ್ನಾಪುರ ಗ್ರಾಮದ ನಿವಾಸಿ ಓಂಕಾರಯ್ಯ ಎಂಬುವರ ಪುತ್ರಿ. ಕಾಲೇಜಿನ ಹಾಸ್ಟೆಲ್ ​ನಲ್ಲಿದ್ದು ವಿದ್ಯಾಭ್ಯಾಸ ನಡೆಸುತ್ತಿದ್ದಳು. ಈ ನಡುವೆ ಇಂದು ಪರೀಕ್ಷೆ ಬರೆಯಲು ಕಾಲೇಜಿಗೆ ಬಂದಿದ್ದಳು. ಪರೀಕ್ಷೆ ನಡುವೆ ವಾಶ್​ ರೂಂಗೆ ಹೋಗುವುದಾಗಿ ಹೇಳಿ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ದೊಡ್ಡಪೇಟೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. : - – -