ಟ್ರ್ಯಾಕ್ಟರ್ ಮತ್ತು ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ: 20ಕ್ಕೂ ಹೆಚ್ಚು ಜನರಿಗೆ ಗಾಯ. ವಿಜಯಪುರ,ಡಿಸೆಂಬರ್,2,2023(..):ಟ್ರ್ಯಾಕ್ಟರ್​ ಮತ್ತು ಸರ್ಕಾರಿ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಬಳಿ ಈ ಘಟನೆ ನಡೆದಿದೆ. ಈ ವೇಳೆ 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಅಪಘಾತ ನಡೆದು 2 ಗಂಟೆಗಳ ಬಳಿಕ ಆ್ಯಂಬುಲೆನ್ಸ್ ಸ್ಥಳಕ್ಕೆ ಬಂದ ಹಿನ್ನೆಲೆಯಲ್ಲಿ ಜನರು ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಗಾಯಾಳುಗಳನ್ನ ಆ್ಯಂಬುಲೆನ್ಸ್​ ನಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತು ಇಂಡಿ ತಾಲೂಕಿನ ಝಳಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. : - - – - 20 .