ಎಸ್ ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ. ಬೆಂಗಳೂರು, ಡಿಸೆಂಬರ್, 1,2023(..):ಎಸ್​ ಎಸ್​ ಎಲ್​ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. 2024 ಮಾರ್ಚ್​ 02 ರಿಂದ ಮಾರ್ಚ್​ 22ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಇನ್ನು ಮಾರ್ಚ್​ 25 ರಿಂದ ಏಪ್ರಿಲ್​​ 06 ರವರೆಗೆ ಎಸ್ಎಸ್ಎಲ್ ಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮೂರು ತಿಂಗಳ ಮುಂಚಿತವಾಗಿಯೇ ತಾತ್ಕಲಿಕ ವೇಳಾಪಟ್ಟಿ ಪ್ರಕಟ ಮಾಡಿದೆ. ಎಸ್.ಎಸ್.ಎಲ್.ಸಿ.ಮತ್ತು ದ್ವಿತೀಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆ-1 ರ ತಾತ್ಕಾಲಿಕ ವೇಳಾಪಟ್ಟಿಗೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್‌ 15ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಎಸ್‍ಎಸ್‍ಎಲ್‍ಸಿ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ.. ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ ಹೀಗಿದೆ. : – - –- .