ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ ನಟ ಶಿವರಾಜ್ ಕುಮಾರ್. ಬೆಂಗಳೂರು,ನವೆಂಬರ್,28,2023(..):ಹಿರಿಯ ಕಲಾವಿದೆ ಲೀಲಾವತಿ ಅವರು ಬಹುದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು ಈ ಹಿನ್ನೆಲೆಯಲ್ಲಿ ನಟ ಶಿವರಾಜ್ ಕುಮಾರ್ ಅವರು ಇಂದು ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಹಿರಿಯ ನಟಿ ಲೀಲಾವತಿ ಅವರ ಮನೆಗೆ ನಟ ಶಿವರಾಜ್​ ಕುಮಾರ್​​ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ಲೀಲಾವತಿ ಅವರ ತೋಟದ ಮನೆಯಲ್ಲಿದ್ದಾರೆ. ಇಂದು ನಟ ಶಿವರಾಜ್​ಕುಮಾರ್ ಹಾಗೂ ಪತ್ನಿ ಗೀತಾ ಶಿವರಾಜ್​ ಕುಮಾರ್​​ ಅವರು ನಿವಾಸಕ್ಕೆ​​ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಮನೆಗೆ ಆಗಮಿಸಿದ್ದ ಶಿವರಾಜ್ ಕುಮಾರ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿನೋದ್ ರಾಜ್ , ಅಮ್ಮನ ಆರೋಗ್ಯದ ಕುರಿತು ಮಾಹಿತಿ ನೀಡಿದರು. ಲೀಲಾವತಿ ಅವರಿಗೆ ಈಗ 87 ವರ್ಷವಾಗಿದ್ದು, 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. : - - - - ’ -.